Connect with us

ರಾಜ್ಯ ಸುದ್ದಿ

ಭಗವದ್ಗೀತೆ ಸುಟ್ಟ ಬುದ್ಧಿಹೀನ ಜೀವಿ ಕೆ ಎಸ್ ಭಗವಾನ್ ಬಂಧನ

ಮೈಸೂರು: ಭಗವದ್ಗೀತೆ ಗ್ರಂಥಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಕ ಕೆ.ಎಸ್.ಭಗವಾನ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ, ಪತ್ರಿಕೋದ್ಯಮ ಪ್ರಾಧ್ಯಾಪಕ ಮಹೇಶ್ ಚಂದ್ರಗುರು ಅವರನ್ನೂ ಭಗವಾನ್ ಅವರೊಂದಿಗೆ ಬಂಧಿಸಿದ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಏನಿದು ಪ್ರಕರಣ?
ಮೈಸೂರು ವಿವಿ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವದ್ಗೀತೆ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸರು ಈ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಮೂವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಮೂವರನ್ನು ಬಂಧಿಸಿದ ಪೊಲೀಸರು ಮಧ್ಯಾಹ್ನ 3 ಗಂಟೆ ಸುಮಾರಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.ಮೂವರೂ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಸಂಜೆವರೆಗೂ ತೀರ್ಪನ್ನು ಕಾಯ್ದಿರಿಸಲಾಗಿದೆ.
-ಸುವರ್ಣ ನ್ಯೂಸ್

2 Comments

2 Comments

 1. SHANKARI

  January 4, 2018 at 11:40 am

  LADDI BHAGYA!

  • mOHAN KUMAR . N

   January 7, 2018 at 4:10 pm

   Biggest crime. Do not provide bail. Hang dem scoundrels..

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

More in ರಾಜ್ಯ ಸುದ್ದಿ

To Top