ಲಂಕಾದಲ್ಲಿ ಕೋಮುಗಲಭೆ : ಮಸೀದಿ ಅಂಗಡಿ ಮುಂಗಟ್ಟುಗಳು ಧ್ವಂಸ :ಅನಿರ್ದಿಷ್ಟಾವಧಿ ಕರ್ಫ್ಯೂ ಜಾರಿ ಮಾಡಿದ ಶ್ರೀಲಂಕಾ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀಲಂಕಾದಲ್ಲಿ ಈಸ್ಟರ್ ಸಂದರ್ಭ ಇಸ್ಲಾಮಿಕ್ ಉಗ್ರರು ದಾಳಿ ನಡೆಸಿ 260 ಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಶ್ರೀಲಂಕಾದಾದ್ಯಂತ ಕೋಮು ಗಲಭೆ ಭುಗಿಲೆದ್ದಿದ.ಪ್ರಮುಖವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಮಸೀದಿ ಮನೆ ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಶ್ರೀಲಂಕಾ ಸರ್ಕಾರ ಅನಿರ್ದಿಷ್ಟಾವಧಿಯ ವರೆಗೆ ಕರ್ಫ್ಯೂ ಜಾರಿ ಮಾಡಿದೆ .ಕೋಮು ಗಲಭೆಯಲ್ಲಿ ಓರ್ವ ವ್ಯಕ್ತಿ ಕೂಡಾ ಮೃತಪಟ್ಟಿದ್ದಾನೆ ಎಂದು ವರದಿಗಳು ತಿಳಿಸಿವೆ .ಬೌದ್ಧ ಮತದ ಬಹುಸಂಖ್ಯಾತರಾಗಿ ಗುರುತಿಸಿಕೊಂಡಿರುವ ಸಿಂಹಳೀಯರು ಮುಸ್ಲಿಂ ಮಾಲೀಕತ್ವದ ಅಂಗಡಿಗಳು ಮತ್ತು ಮನೆಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ ಎಂದು ಕ್ಯಾಬಿನೆಟ್ ಮಂತ್ರಿ ಮತ್ತು ಶ್ರೀಲಂಕಾ ಮುಸ್ಲಿಂ ಕಾಂಗ್ರೆಸ್ ನಾಯಕ ರಾಫ್ ಹಕೆಮ್ ತಿಳಿಸಿದ್ದಾರೆ.

Leave a Reply

This site uses Akismet to reduce spam. Learn how your comment data is processed.