ಭ್ರಷ್ಟಾಚಾರಿ ರಾಜೇಂದ್ರ ಕುಮಾರ್ ಗೆ ಟಿಕೆಟ್ ನೀಡಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಜನಾರ್ದನ ಪೂಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

ಸದಾ ಖಡಕ್ ಹೇಳಿಕೆಯಿಂದಲೇ ಸದ್ದು ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಮುಂಬರುವ ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಕುರಿತಾಗಿ ಪ್ರತಿಕ್ರಿಯಿಸಿದ್ದು ಈ ಬಾರಿಯೂ ನಾನು ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೇನೆ ಆದರೆ ಎಂಎನ್ ರಾಜೇಂದ್ರ ಕುಮಾರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳಾಗುತ್ತಿದೆ ರಾಜೇಂದ್ರ ಕುಮಾರ್ ಭ್ರಷ್ಟರಾಗಿದ್ದು ಅವರಿಗೆ ಟಿಕೆಟ್ ನೀಡಿದರೆ ಬಂಡಾಯವಾಗಿ ಸ್ಪರ್ಧಿಸುತ್ತೇನೆ ಎಂದು ಜನಾರ್ದನ ಪೂಜಾರಿ ಮಂಗಳೂರಿನಲ್ಲಿ ಗುಡುಗಿದ್ದಾರೆ.ಐವಾನ್ ಡಿಸೋಜಾ ಅವರಿಗೆ ಟಿಕೆಟ್ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ ಜನಾರ್ದನ ಪೂಜಾರಿಯವರು ರಮಾನಾಥ ರೈ, ಬಿಕೆ ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ ಅವರಿಗೆ ಟಿಕೆಟ್ ನೀಡಿದರೆ ಬೆಂಬಲವಿದೆ ಎಂದು ತಿಳಿಸಿದ್ದಾರೆ .ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯಿಂದ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯ ಎಂಬ ಅಚ್ಚರಿಯ ಹೇಳಿಕೆಯನ್ನು ಕೂಡ ಜನಾರ್ದನ ಪೂಜಾರಿ ಇದೇ ಸಂದರ್ಭದಲ್ಲಿ ನೀಡಿದ್ದಾರೆ.

.

Leave a Reply

This site uses Akismet to reduce spam. Learn how your comment data is processed.