ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬದಲಾವಣೆ ಮಾಡಲು ಬಿಜೆಪಿ ಕಾರ್ಯಕರ್ತರಿಂದಲೇ ಪಾದಯಾತ್ರೆ ?

ಈ ಸುದ್ದಿಯನ್ನು ಶೇರ್ ಮಾಡಿ

ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ .ಮುಂದಿನ ವಾರದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.ಇತ್ತ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಚುನಾವಣಾ ಅಖಾಡದಲ್ಲಿ ಅಭ್ಯರ್ಥಿ ಬದಲಾವಣೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ.ಟಿಕೆಟ್ ಆಕಾಂಕ್ಷಿಗಳ ಪೈಕಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಸತ್ಯಜಿತ್ ಸುರತ್ಕಲ್ ಮತ್ತು ಬ್ರಿಜೇಶ್ ಚೌಟ ಅವರ ಬೆಂಬಲಿಗರು ಮತ್ತು ಹಲವಾರು ಬಿಜೆಪಿ ಕಾರ್ಯಕರ್ತರು ಹಾಲಿ ಸಂಸದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ಅಭ್ಯರ್ಥಿಯ ಬದಲಾವಣೆ ಮಾಡಲು ಪಟ್ಟು ಹಿಡಿದಿದ್ದಾರೆ .

ಈಗಾಗಲೇ ಎರಡು ಹಂತದ ಆಂತರಿಕ ಸಮೀಕ್ಷೆಯ ವರದಿ ರಾಷ್ಟ್ರೀಯ ವರಿಷ್ಠರಿಗೆ ತಲುಪಿದ್ದು .ಸಂಘ ಪರಿವಾರದ ಹಿರಿಯರು ಕೂಡ ನಳೀನ್ ಕುಮಾರ್ ಕಟೀಲ್ ಅವರ ಪುನರಾಯ್ಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಇನ್ನು ಪ್ರಬಲ ಆಕಾಂಕ್ಷಿಯಾದ ಸತ್ಯಜಿತ್ ಸುರತ್ಕಲ್ ಅವರ ಪರ ಬೆಂಬಲಿಗರು ಜಿಲ್ಲೆಯಾದ್ಯಂತ ಕಟೌಟ್ ಹಾಕಿ ಅಭ್ಯರ್ಥಿ ಬದಲಾವಣೆಯ ಪಟ್ಟು ಹಿಡಿದಿದ್ದಾರೆ.ಅಲ್ಲದೆ ಬಿಜೆಪಿ ಕಾರ್ಯಕರ್ತರಿಂದ ಸತ್ಯಜಿತ್ ಸುರತ್ಕಲ್ ಅವರ ಪರವಾಗಿ ಮತ್ತು ಅಭ್ಯರ್ಥಿ ಬದಲಾವಣೆಗೆ ಆಗ್ರಹಿಸಿ ಸುರತ್ಕಲ್ನಿಂದ ಸುಳ್ಯ ವರೆಗೆ ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ.

ಹಾಲಿ ಸಂಸದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಮಾಡುತ್ತಿದ್ದಾರೆ ಎನ್ನಲಾಗಿದೆ .ಸಂಸದರ ವಿರುದ್ಧ ಕೇಳಿ ಬಂದಿರುವ ಆಕ್ರೋಶದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಕೂಡ ನಳಿನ್ ಕುಮಾರ್ ಪರ ಅಪಪ್ರಚಾರ ಸಹಿಸಲಾಗುವುದಿಲ್ಲ ಎಚ್ಚರಿಕೆ ಕೂಡ ನೀಡಿದ್ದಾರೆ.

Leave a Reply

This site uses Akismet to reduce spam. Learn how your comment data is processed.