ಜನಾರ್ದನ ಪೂಜಾರಿ ಮನೆಗೂ ನುಗ್ಗಿದ ನೇತ್ರಾವತಿ ನೀರು

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣಕನ್ನಡ : ಬಂಟ್ವಾಳ ನೇತ್ರಾವತಿ ನದಿ ತುಂಬಿ ಹರಿದ ಪರಿಣಾಮ ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಮನೆಗೂ ನೆರೆ ನುಗ್ಗಿದೆ. ಇದರಿಂದ ಭಂಡಾರಿಬೆಟ್ಟುವಿನಲ್ಲಿರುವ ಪೂಜಾರಿಯ ಮನೆ ಜಲಾವೃತವಾಗಿದ್ದು, ಮನೆಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಬಂಟ್ವಾಳ ಬಂಟರ ಭವನಕ್ಕೂ ನೆರೆ ನೀರು ಪ್ರವೇಶಿಸಿದೆ. ಭವನದ ತಳ ಅಂತಸ್ತಿಗೆ ನೀರು ನುಗ್ಗಿದ್ದು, ಪಾರ್ಕಿಂಗ್ ಏರಿಯಾ ಸಂಪೂರ್ಣ ಜಲಾವೃತಗೊಂಡಿದೆ. ಇಲ್ಲಿನ ಡೈಮೆಂಡ್ ಸ್ಕೂಲ್, ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರಕ್ಕೂ ನೀರು ನುಗ್ಗಿದೆ. ತಲಪಾಡಿಯಲ್ಲಿ ೧೭ ಮನೆಗಳು ಜಲಾವೃತಗೊಂಡಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿಯಲ್ಲಿರುವ ಸರ್ವೀಸ್ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

Leave a Reply

This site uses Akismet to reduce spam. Learn how your comment data is processed.