ಡಿಕೆಶಿ ಬಂಧನ ವಿರೋಧಿಸಿ ಮಂಗಳೂರಿನಲ್ಲಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದ ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಡಿಕೆಶಿ ಬೆಂಬಲಿಗರು ಬುಧವಾರ ಹಲವೆಡೆ ಪ್ರತಿಭಟನೆ ನಡೆಸಿದ್ದರು, ಹಲವು ಪ್ರದೇಶಗಳಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಕೂಡ ಹಾನಿ ಮಾಡಲಾಗಿತ್ತು .ಇನ್ನು ದಕ್ಷಿಣ ಕನ್ನಡದಲ್ಲೂ ಮೂರು ಸ್ಥಳಗಳಲ್ಲಿ ಡಿಕೆಶಿ ಬೆಂಬಲಿಗರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು .ಈ ಪೈಕಿ ನಗರದ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ ಸೇರಿ ತಲಾ ಒಂದು ಖಾಸಗಿ ಬಸ್ ಮೇಲೆ ಹೆಲ್ಮೆಟ್ ಧರಿಸಿದ ದುಷ್ಕರ್ಮಿಗಳಿಬ್ಬರು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು .ಘಟನೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜೆಪ್ಪು ನಿವಾಸಿ ಮಹೇನ್ ಅಬ್ದುಲ್ ರಹಮಾನ್ (೧೮)ಮತ್ತು ಕುದ್ರೋಳಿ ನಿವಾಸಿ ಅಬ್ದುಲ್ ಮನ್ನಾನ್ (೨೧) ಎಂಬ ಇಬ್ಬರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ .ಡಿಕೆ ಶಿವಕುಮಾರ್ ಅವರ ಬಂಧನ ವಿರೋಧಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

Leave a Reply

This site uses Akismet to reduce spam. Learn how your comment data is processed.