ನಿಷೇಧಿತ ಜಮಾತ್ ಎ ಇಸ್ಲಾಮಿ ಸಂಘಟನೆಯ ಕಾರ್ಯಕರ್ತ ಪೊಲೀಸ್ ಕಸ್ಟಡಿಯಲ್ಲಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಿಷೇಧಕ್ಕೆ ಒಳಪಟ್ಟ ಜಮಾತ್ ಎ ಇಸ್ಲಾಮಿ ಸಂಘಟನೆಯ ಕಾರ್ಯಕರ್ತರಾದ ರಿಜ್ವಾನ್ ಅಹಮ್ಮದ್ ಪೊಲೀಸ್ ಕಸ್ಟಡಿಯಲ್ಲಿ ಮೃತನಾಗಿದ್ದಾನೆ ಎಂದು ವರದಿಯಾಗಿದೆ .ಕಣಿವೆಯಲ್ಲಿನ ಭಯೋತ್ಪಾದಕ ಚಟುವಟಿಕೆ ಸಂಬಂಧಿಸಿ ತನಿಖೆಗೆ ಒಳಪಟ್ಟ ರಿಜ್ವಾನ್ ಅಹ್ಮದ್ ಜಮಾತ್ ಎ ಇಸ್ಲಾಮಿ ಸಂಘಟನೆಯ ಸಕ್ರಿಯ ಕಾರ್ಯಕರ್ತನಾಗಿದ್ದು ಎನ್ಐಎ ಈತನ ಪ್ರಕರಣದ ಕುರಿತು ತನಿಖೆ ನಡೆಸುತ್ತಿತ್ತು ಎಂದು ತಿಳಿದುಬಂದಿದೆ.ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾದ ಕುರಿತು ಆರ್ ಪಿಸಿ 176ರ ಅಡಿಯಲ್ಲಿ ತನಿಖೆ ಕೂಡ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಇನ್ನು ಘಟನೆ ಸಂಬಂಧಿಸಿ ರೊಚ್ಚಿಗೆದ್ದ ಪ್ರತ್ಯೇಕವಾದಿಗಳು ಮತ್ತು ಪ್ರತ್ಯೇಕತಾವಾದಿ ಬೆಂಬಲಿಗರು ಪುಲ್ವಾಮಾ ಜಿಲ್ಲೆಯ ಆವಂತಿಪುರ ದತ್ತ ಧಾವಿಸಿ ಕಲ್ಲು ತೂರಾಟ ನಡೆಸುತ್ತಿದ್ದಾರೆ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಕಲ್ಲು ತೂರಾಟಗಾರರನ್ನು ಭದ್ರತಾ ಪಡೆಗಳು ಹಿಮ್ಮೆಟ್ಟಿಸಿದ್ದಾರೆ .

Leave a Reply

This site uses Akismet to reduce spam. Learn how your comment data is processed.