“ಕಾಶ್ಮೀರ ” ಉಗ್ರರ ಅಟ್ಟಹಾಸ, ಗ್ರೆನೇಡ್ ದಾಳಿ ಯೋಧರು ಸೇರಿ 11 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದಾರೆ, ರಾಜಧಾನಿ ಶ್ರೀನಗರದಲ್ಲಿ ಗ್ರೆನೇಡ್ ದಾಳಿ ನಡೆಸಿದ ಪರಿಣಾಮ 7 ಮಂದಿ ಸೈನಿಕರೂ ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ.ಶ್ರೀನಗರದ ಜನನಿಭಿಡ ಲಾಲ್ ಚೌಕ್ ನ ಪಲ್ಲಾಡಿಯಂ ಸಿನೆಮಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಂಜೆ ಸುಮಾರು 6.45 ರ ವೇಳೆಯಲ್ಲಿ ಉಗ್ರರು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಪರಿಣಾಮ ಘಟನೆಯಲ್ಲಿ 7 ಸೈನಿಕರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರು ಮಹಿಳೆಯರು ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

This site uses Akismet to reduce spam. Learn how your comment data is processed.