ಸಿಬಿಐ ಅಧಿಕಾರಿಗಳ ಜೊತೆ ದುರ್ವರ್ತನೆ ತೋರಿದ ಕೋಲ್ಕತ್ತಾ ಪೊಲೀಸ್ ಮುಖ್ಯಸ್ಥ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸೂಚಿಸಿದ ಕೇಂದ್ರ ಗೃಹ ಸಚಿವಾಲಯ

ಈ ಸುದ್ದಿಯನ್ನು ಶೇರ್ ಮಾಡಿ


ನವದೆಹಲಿ : ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರಿಗೆ ತನಿಖೆಗೆ ಸಹಕರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ರಾಜೀವ್ ಕುಮಾರ್ ವಿರುದ್ಧ ಭಾರತ ಸರ್ಕಾರದ ನಿಯಮ ಉಲ್ಲಂಘನೆ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ ಎಂದು ವರದಿಯಾಗಿದೆ.

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಹಲವಾರು ಕಡತಗಳ ನಾಪತ್ತೆ ಬಗ್ಗೆ ಪ್ರಶ್ನಿಸಿ ಹಲವು ಬಾರಿ ನೋಟಿಸ್ ಜಾರಿ ಮಾಡಿದರೂ ಉತ್ತರಿಸದ ಪೊಲೀಸ್ ಕಮಿಷನರ್ ಅವರ ನಿವಾಸದ ಬಳಿ ಸಿಬಿಐ ಅಧಿಕಾರಿಗಳು ಆಗಮಿಸಿದ ಸಂದರ್ಭ ಕೋಲ್ಕತ್ತಾ ಪೊಲೀಸರು ಸಿಬಿಐ ಅಧಿಕಾರಿಗಳಿಗೆ ದಿಗ್ಬಂಧನ ವಿಧಿಸಿ ಕೆಲವರನ್ನು ಬಂಧಿಸಿ ಸ್ಥಳೀಯ ಠಾಣೆಗೆ ಕೊಂಡೊಯ್ದ ನಂತರದ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೊಲೀಸ್ ಕಮಿಷನರ್ ಪರವಾಗಿ ನಿಂತು ರಾತೋರಾತ್ರಿ ಧರಣಿ ನಡೆಸಿದ್ದರು .

Leave a Reply

This site uses Akismet to reduce spam. Learn how your comment data is processed.