ರೈಲು ವಿಳಂಬದ ಎಡವಟ್ಟು : ಮತೊಮ್ಮೆ ನೀಟ್ ಬರೆಯಲು ಅವಕಾಶ ನೀಡಿದ ಕೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ರೈಲು ವಿಳಂಬದ ಎಡವಟ್ಟಿನ ಕಾರಣ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ’ (ನೀಟ್) ಬರೆಯಲು ಕರ್ನಾಟಕದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ಭರವಸೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಜಾವ್ಡೇಕರ್ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮತ್ತೊಮ್ಮೆ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ಟ್ವೀಟರ್ ಮೂಲಕ ಭರವಸೆ ನೀಡಿದ್ದರು. ನೀಟ್ ಪರೀಕ್ಷೆ ಅವಕಾಶ ವಂಚಿತ ವಿದ್ಯಾರ್ಥಿಗಳು ಹಿಂದೆ ಪ್ರಕಟಿಸಲಾದ ಪರೀಕ್ಷಾ ಕೇಂದ್ರಗಳಲ್ಲಿ ಮರು ಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮೇ 20 ರಂದು ಕರ್ನಾಟಕದಲ್ಲಿ ಮರು ಪರೀಕ್ಷೆ ಹಾಗೂ ಒಡಿಶ್ಸಾ ರಾಜ್ಯದಲ್ಲಿ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿದೆ.

Leave a Reply

This site uses Akismet to reduce spam. Learn how your comment data is processed.