ಸಿಬಿಐ ವಿಚಾರಣೆಗೆ ಹಾಜರಾಗಿ: ಕೋಲ್ಕತಾ ಪೊಲೀಸ್ ಕಮಿಷನರ್‌ಗೆ ಸುಪ್ರೀಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ


ಕೇಂದ್ರಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಸಂವಿಧಾನ ಉಳಿಸಿ ಧರಣಿ 3ನೇ ದಿನಕ್ಕೆ ಕಾಲಿಟ್ಟಿದ್ದು, ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ಸಿಬಿಐಗೆ ಸಹಕಾರ ನೀಡುವಂತೆಯೂ ಸೂಚಿಸಿದೆ.ಇದೇ ವೇಳೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಕಮಿಷನರ್ ಕುಮಾರ್‌ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ. ಫೆಬ್ರವರಿ 20ರೊಳಗೆ ಉತ್ತರಿಸುವಂತೆಯೂ ನಿರ್ದೇಶನ ನೀಡಿದೆ.

ಪಶ್ಚಿಮ ಬಂಗಾಳದಿಂದ ಹೊರಗೆ, ಇನ್ನೊಂದು ರಾಜ್ಯದ ರಾಜಧಾನಿಯಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಕೋಲ್ಕತಾ ಪೊಲೀಸ್ ಹೈಕಮಿಷನರ್‌ ರಾಜೀವ್ ಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿರುವುದು ನ್ಯಾಯಕ್ಕೆ ಸಂದ ಬಹುದೊಡ್ಡ ಜಯ ಎಂದು ಬಿಜೆಪಿ ಬಣ್ಣಿಸಿದೆ.

Leave a Reply

This site uses Akismet to reduce spam. Learn how your comment data is processed.