ಪುಲ್ವಾಮಾ : ಸೇನಾ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಿದ ಉಗ್ರರು

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಮತ್ತೆ ಬಾಲ ಬಿಚ್ಚಿದ್ದಾರೆ .ಈ ಬಾರಿ 44 ರಾಷ್ಟ್ರೀಯ ರೈಫಲ್ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ಐಇಡಿ ಬಾಂಬ್ ದಾಳಿ ನಡೆಸಿದ್ದಾರೆ .ಎನ್ಡಿಟಿವಿ ವರದಿಗಳ ಪ್ರಕಾರ ಘಟನೆಯಲ್ಲಿ ಯೋಧರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು ಸ್ಥಳದಲ್ಲಿ ಕಲ್ಲು ತೂರಾಟ ಮತ್ತು ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ . ಮೊದಲ ಬಾರಿಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸುವ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ .

Leave a Reply

This site uses Akismet to reduce spam. Learn how your comment data is processed.