ಶೋಪಿಯನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ : ದಕ್ಷಿಣ ಕಾಶ್ಮೀರದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸಫಲರಾಗಿದ್ದಾರೆ ಎಂದು ವರದಿಯಾಗಿದೆ .ಗುಪ್ತಚರ ಇಲಾಖೆಯ ಖಚಿತ ಮಾಹಿತಿಯನ್ನಾಧರಿಸಿ ಹೇಂಡ್ ಸತಿರಾ ಗ್ರಾಮದಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಮೃತಪಟ್ಟ ಉಗ್ರರನ್ನು ಲಷ್ಕರ್ ತೈಬಾ ಸಂಘಟನೆಯ ಬೇಷರತ್ ಅಹ್ಮದ್ ಮತ್ತು ತಾರಿಕ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂದು ಹಿಂದೂ ವರದಿಗಳು ತಿಳಿಸಿವೆ.ಸದ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು ಇಂಟರ್ನೆಟ್ ಸೇವೆಗಳನ್ನು ರದ್ದುಪಡಿಸಲಾಗಿದೆ.

Leave a Reply

This site uses Akismet to reduce spam. Learn how your comment data is processed.