ಕಣಿವೆಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರನ ಹೊಡೆದುರುಳಿಸಿದ ಸೇನೆ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ : ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಓರ್ವ ಉಗ್ರನ್ನು ಸೇನೆ ಹೊಡೆದುರುಳಿಸಿದೆ. ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಮಾಹಿತಿಯನ್ನು ಪಡೆದ ಭದ್ರತಾ ಪಡೆಗಳು ಕೂಡಲೇ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡಿನ ಮಳೆಗರೆದಿದ್ದು, ಸೈನಿಕರು ಪ್ರತಿದಾಳಿ ನಡೆಸಿದಾಗ ಉಗ್ರನೋರ್ವ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.ಇನ್ನು ಘಟನಾ ಸ್ಥಳದಲ್ಸಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ಇದ್ದು, ಸೇನೆ ತೀವ್ರ ಶೋಧ ನಡೆಸುತ್ತಿದೆ. ಶೋಧ ಕಾರ್ಯಾಚರಣೆ ವೇಳೆ ಸೈನಿಕರಿಗೆ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳು ಕಂಡುಬಂದಿದ್ದು, ಅವುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

This site uses Akismet to reduce spam. Learn how your comment data is processed.