ಪಶ್ಚಿಮ ಬಂಗಾಳ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಮಮತಾ ನೇತೃತ್ವದ ಪಶ್ಚಿಮ ಬಂಗಾಳ ಸರಕಾರ ಅಡ್ಡಿಪಡಿಸುತ್ತಿದೆ ಎಂದು ಸಿಬಿಐ ಸುಪ್ರೀಂ ಕೋರ್ಟ್ಗೆ ದೂರು ಸಲ್ಲಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿದೆ .ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರ ವಿರುದ್ಧ ಹಲವು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು ಆದರೆ ವಿಚಾರಣೆಗೆ ಸಹಕರಿಸಲು ವಿಫಲವಾಗಿದ್ದಲ್ಲದೆ, ತನಿಖೆಗೆ ಅಡ್ಡಿಪಡಿಸಲು ಯತ್ನಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ಗೆ ಸಿಬಿಐ ದೂರು ನೀಡಿದೆ .ಇನ್ನು ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ಸಾಕ್ಷ್ಯಾಧಾರಗಳನ್ನು ಪಶ್ಚಿಮ ಬಂಗಾಳ ಸರ್ಕಾರ ಅಥವಾ ಪೊಲೀಸ್ ಅಧಿಕಾರಿಗಳು ನಾಶಪಡಿಸುತ್ತಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಒಂದು ದಾಖಲೆಯನ್ನು ಸಿಬಿಐ ಸಲ್ಲಿಸಿದರೂ ಅದರ ಪರಿಣಾಮ ಗಂಭೀರವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೈ ರಾಜ್ಯದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ ಎಂದು ani ವರದಿ ಮಾಡಿದೆ.
Hearing on CBI plea in SC: CJI Gogoi says, "If Kolkata Police Commissioner even remotely thinks of destroying evidence, bring the material before this Court. We will come down so heavily on him that he will regret." #WestBengal pic.twitter.com/4VRhH7b4Ff
— ANI (@ANI) February 4, 2019
ಇನ್ನು ಸಿಬಿಐ ತುರ್ತು ವಿಚಾರಣೆ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ನಾಳೆ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು ವರದಿಯಾಗಿದೆ.