ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಎಲ್ ಸಂತೋಷ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ನಿನ್ನೆ ತಡ ರಾತ್ರಿಯವರೆಗೆ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಮಣೆ ಹಾಕಲಾಗಿದೆ.ಬಸವನಗುಡಿಯ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ ರವರ ಅಣ್ಣನ ಮಗನಾದ ತೇಜಸ್ವಿ ಸೂರ್ಯ ಈಗಾಗಲೇ ಆರ್ಎಸ್ಎಸ್ ಹಾಗೂ ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದವರು.ಇವರ ಆಯ್ಕೆಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಮತ್ತು ಮುಕುಂದ್ ಅವರ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿದು ಬಂದಿದೆ

ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿಯಾಗಿರುವವರು ಹಾಗೂ ಜಗತ್ತಿನ ಅತ್ಯಂತ ದೊಡ್ಡ ಪಕ್ಷದ ಅಧ್ಯಕ್ಷರು ತಮ್ಮ ಮೇಲೆ ನಂಬಿಕೆ ಇಟ್ಟು ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸಲು ಅವಕಾಶ ನೀಡಿರುವುದಕ್ಕೆ ಧನ್ಯವಾದ ಹೇಳಿರುವ ತೇಜಸ್ವಿಸೂರ್ಯ, ಇಂತಹದ್ದೆಲ್ಲಾ ನಮ್ಮ ಬಿಜೆಪಿಯಲ್ಲಿ ಮಾತ್ರ ಆಗಲು ಸಾಧ್ಯ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

Loading...

Leave a Reply

This site uses Akismet to reduce spam. Learn how your comment data is processed.