ದೇವೇಗೌಡರ ವಿರುದ್ಧ ತೊಡೆತಟ್ಟಿದ ಮುದ್ದಹನುಮೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರ ಬಗ್ಗೆ ಜಿಲ್ಲೆಯ ಕಾಂಗ್ರೆಸ್ ನಾಯಕರಲ್ಲಿ ಉಂಟಾಗಿದ್ದ ತೀವ್ರ ಅಸಮಾಧಾನ ಉಂಟುಮಾಡಿದೆ. ಈ ನಡುವೆ  ತುಮಕೂರು ಲೋಕಸಭಾ ಕ್ಷೇತ್ರದಿಂದ ತಾವು ಸ್ಪರ್ಧೆ ಮಾಡುವುದಾಗಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ‌ದೇವೇಗೌಡ ಇಂದಿಲ್ಲಿ ಪ್ರಕಟಿಸಿದ್ದಾರೆ.ಈ ಹಿನ್ನಲೆಯಲ್ಲಿ ಆಕ್ರೋಶಗೊಂಡ ಹಾಲಿ ಸಂಸದ ಮುದ್ದಹನುಮೇಗೌಡ ತುಮಕೂರಿನಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ತಾವು ಮತ್ತೆ ಸ್ಪರ್ಧೆ ಮಾಡಲಿದ್ದು, ಸೋಮವಾರ ನಾಮಪತ್ರ ಸಲ್ಲಿಸುವುದಾಗಿ ಮುದ್ದಹನುಮೇಗೌಡರು ಹೇಳಿದ್ದಾರೆ. ಮನವೊಲಿಕೆ ಪ್ರಯತ್ನಕ್ಕೆ ನಾನು ಮೊರೆ ಹೋಗುವುದಿಲ್ಲ. ಕಾಂಗ್ರೆಸ್ ಬಿ ಫಾರಂ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ನಿಲ್ಲಲಿಕ್ಕೂ ಸಿದ್ದ ಎಂಬ ಅರ್ಥದಲ್ಲಿ ಮುದ್ದಹನುಮೇಗೌಡರು ಹೆಬ್ಬೂರಿನ ಸಮೀಪದ ಅವರ ತೋಟದಲ್ಲಿ ಕರೆದಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಘೋಷಿಸಿದ್ದಾರೆ.

Leave a Reply

This site uses Akismet to reduce spam. Learn how your comment data is processed.