ಸದ್ಯ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಲು ಆಗುವುದಿಲ್ಲ ಅನಾರೋಗ್ಯದಿಂದ ಬಳಲುತ್ತಿದ್ದೇವೆ : ಹೆಚ್‌ಡಿಕೆ, ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು :ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಅನಾರೋಗ್ಯದ ಕಾರಣ ಭೇಟಿ ನೀಡಲು ಸಾಧ್ಯವಾಗಿಲ್ಲ. ಇನ್ನು ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ತೆರಳಿ ಜನರ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.ಜ್ವರದಿಂದ ಬಳಲುತ್ತಿರುವ ಕಾರಣ ಪ್ರವಾಹ ಪೀಡಿತ ಪ್ರದೇಶಗಳಿಗೆ ಇದುವರೆಗೂ ಭೇಟಿ ನೀಡಲು ಆಗಿಲ್ಲ. ಇನ್ನು ಒಂದೆರಡು ದಿನಗಳಲ್ಲಿ ಜ್ವರದಿಂದ ಚೇತರಿಸಿಕೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಅವರು ಟ್ವೀಟ್‌ ಮಾಡಿದ್ದಾರೆ.


ಇನ್ನು ಕಾಂಗ್ರೆಸ್ ನಾಯಕ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದ ಪ್ರವಾಹ ಸಂತ್ರಸ್ತರನ್ನು ಕಂಡು ಮನಸ್ಸು ಮರುಗುತ್ತಿದೆ. ಇಂಥ ಸಂದರ್ಭದಲ್ಲಿ ಅವರೊಂದಿಗೆ ಇರಬೇಕಿತ್ತು ಎನಿಸದರೂ ವೈದ್ಯರ ಸಲಹೆ ಮೇರೆಗೆ ಕೆಲವು ದಿನಗಳ‌ ಕಾಲದ ವಿಶ್ರಾಂತಿ ಪಡೆಬೇಕಾಗಿದೆ.ನನ್ನ ಕ್ಷೇತ್ರ ಬಾದಾಮಿಯಲ್ಲಿ ಸಹ ಪ್ರವಾಹ ಭೀತಿ ಎದುರಾಗಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Loading...

Leave a Reply

This site uses Akismet to reduce spam. Learn how your comment data is processed.