ದಕ್ಷಿಣ ಭಾರತದ ಮೊದಲ ಮಹಿಳಾ ಜಗದ್ಗುರು ಮಾತೆ ಮಹಾದೇವಿ ಲಿಂಗೈಕ್ಯ

ಈ ಸುದ್ದಿಯನ್ನು ಶೇರ್ ಮಾಡಿ


ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಕ್ಷಿಣ ಭಾರತದ ಮೊದಲ ಮಹಿಳಾ ಜಗದ್ಗುರು, ಕೂಡಲಸಂಗಮದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಗುರುವಾರ ಲಿಂಗೈಕ್ಯರಾಗಿದ್ದಾರೆ.ಕಳೆದ ಎಂಟು ದಿನಗಳಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 4.45ಕ್ಕೆ ಕೊನೆಯುಸಿರೆಳೆದಿದ್ದಾರೆ.ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಪ್ರತ್ಯೇಕ ಲಿಂಗಾಯತ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದರು.

Leave a Reply

This site uses Akismet to reduce spam. Learn how your comment data is processed.